Judges 6:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಈ ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಆ ಎರಡನೆಯ ಹೋರಿಯನ್ನು ಈ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರಸ್ತಂಭದ ಕಟ್ಟಿಗೆಯನ್ನು ಈ ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು.
Kannada BSI Bible 2016
ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಿಂದ ಒಂದು ಯಜ್ಞವೇದಿಯನ್ನು ಕಟ್ಟಿಸಿ ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು ಎಂದು ಹೇಳಿದನು.
Kannada Bible (KNCL) BSI 2016
ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು.