Judges 6:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಕುಟುಂಬದವರಿಗೂ ನಗರ ನಿವಾಸಿಗಳಿಗೂ ಹೆದರಿಕೊಂಡಿದ್ದರಿಂದ ಅವನು ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ, ಊರಿನವರಿಗೂ ಹೆದರಿಕೊಂಡಿದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.
Kannada BSI Bible 2016
ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.
Kannada Bible (KNCL) BSI 2016
ಅಂತೆಯೇ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಸರ್ವೇಶ್ವರನು ಹೇಳಿದ ಹಾಗೆ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಅವನು ತನ್ನ ತಂದೆಯ ಮನೆಯವರೆಗೂ, ಆ ಊರಿನ ಮನುಷ್ಯರಿಗೂ ಭಯಪಟ್ಟದ್ದರಿಂದ ಹಗಲಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.