Judges 6:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಗರದ ಜನರು ಯೋವಾಷನಲ್ಲಿಗೆ ಬಂದು ಯೋವಾಷನಿಗೆ, “ನೀನು ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ. ಅವನು ಬಾಳನ ಯಜ್ಞವೇದಿಕೆಯನ್ನು ಕೆಡವಿದ್ದಾನೆ. ಆ ಯಜ್ಞವೇದಿಕೆಯ ಪಕ್ಕದಲ್ಲಿದ್ದ ಅಶೇರಸ್ತಂಭವನ್ನು ಕಡಿದುಹಾಕಿದ್ದಾನೆ. ಅವನನ್ನು ನಾವು ಕೊಂದು ಬಿಡುತ್ತೇವೆ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು.
Kannada BSI Bible 2016
ಆ ಊರಿನವರು ಯೋವಾಷನಿಗೆ--ನಿನ್ನ ಮಗನನ್ನು ಹೊರಗೆ ತಕ್ಕೊಂಡು ಬಾ; ಅವನು ಸಾಯಬೇಕು. ಯಾಕಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ತೋಪನ್ನು ಕಡಿದು ಹಾಕಿದನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜನರು ಯೋವಾಷನಿಗೆ - ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಯಾಕಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ಕಡಿದು ಹಾಕಿದ್ದಾನೆ ಅಂದರು.
Kannada Bible (KNCL) BSI 2016
ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಊರಿನವರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ, ಅವನು ಸಾಯಬೇಕು. ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ, ಅದರ ಬಳಿಯಲ್ಲಿದ್ದ ಅಶೇರ ಸ್ತಂಭವನ್ನು ಕಡಿದುಹಾಕಿದನು,” ಎಂದರು.