Judges 6:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋವಾಷನು, “ಗಿದ್ಯೋನನು ಬಾಳನ ಯಜ್ಞವೇದಿಕೆಯನ್ನು ಕೆಡವಿದ ಪಕ್ಷದಲ್ಲಿ ಬಾಳನು ಅವನೊಡನೆ ವಾದಿಸಲಿ” ಎಂದು ಹೇಳಿದನು. ಅಂದು ಯೋವಾಷನು ಗಿದ್ಯೋನನಿಗೆ ಯೆರುಬ್ಬಾಳ9 ಎಂಬ ಹೊಸ ಹೆಸರನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.
Kannada BSI Bible 2016
ಗಿದ್ಯೋ ನನು ಬಾಳನ ಬಲಿಪೀಠವನ್ನು ಕೆಡವಿದ್ದರಿಂದ ಅವನು ಅವನ ಸಂಗಡ ವ್ಯಾಜ್ಯವಾಡಲೆಂದು ಹೇಳಿ ಆ ದಿನದಲ್ಲಿ ಅವನಿಗೆ ಯೆರುಬ್ಬಾಳನೆಂಬ ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು.
Kannada Bible (KNCL) BSI 2016
ಆ ದಿವಸದಲ್ಲಿ ಅವನು, “ಬಾಳನು ತನ್ನ ಬಲಿಪೀಠವನ್ನು ಕೆಡವಿದವನೊಡನೆ ತಾನೇ ವ್ಯಾಜ್ಯ ಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ‘ಯೆರುಬ್ಬಾಳ’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.