Judges 6:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.
Kannada BSI Bible 2016
ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಗಿದ್ಯೋನನು ಯೆಹೋವನ ಆತ್ಮನ ಆವೇಶವುಳ್ಳವನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.
Kannada Bible (KNCL) BSI 2016
ಆಗ ಗಿದ್ಯೋನನು ಸರ್ವೇಶ್ವರಾತ್ಮಭರಿತನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.