Judges 6:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದ್ದರಿಂದ ಆ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.
Kannada BSI Bible 2016
ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್ ಜೆಬುಲೂನ್ ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.
Kannada Bible (KNCL) BSI 2016
ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯವರ ಬಳಿ ದೂತರನ್ನು ಕಳುಹಿಸಿದಾಗ, ಅವರು ಅವನ ಹಿಂದೆ ಕೂಡಿಬಂದರು. ಆಶೇರ್, ಜೆಬುಲೂನಿನಲ್ಲಿಯೂ, ನಫ್ತಾಲಿನಲ್ಲಿಯೂ ದೂತರನ್ನು ಕಳುಹಿಸಲು, ಅವರು ಇವರಿಗೆ ಭೇಟಿಯಾಗಲು ಬಂದರು.