Judges 6:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾಗೆಯೇ ಆಯಿತು. ಗಿದ್ಯೋನನು ಮರುದಿನ ಬೆಳಿಗ್ಗೆ ಬೇಗ ಎದ್ದು ಕುರಿಯ ತುಪ್ಪಟವನ್ನು ಹಿಂಡಿದನು. ಆ ಕುರಿಯ ತುಪ್ಪಟದಿಂದ ಒಂದು ಬಟ್ಟಲು ತುಂಬ ನೀರು ಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.
Kannada BSI Bible 2016
ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಆಯಿತು; ಅವನು ಮರುದಿವಸ ಹೊತ್ತಾರೆಯಲ್ಲಿ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.
Kannada Bible (KNCL) BSI 2016
ಹಾಗೆಯೇ ಆಯಿತು; ಅವನು ಮರುದಿವಸ ಮುಂಜಾನೆ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಹಾಗೆಯೇ ಆಯಿತು. ಅವನು ಮರುದಿವಸ ಉದಯದಲ್ಲಿ ಎದ್ದು, ಉಣ್ಣೆಯ ತುಪ್ಪಟವನ್ನು ತೆಗೆದುಕೊಂಡು, ಅದರೊಳಗಿದ್ದ ಮಂಜಿನ ನೀರನ್ನು ಒಂದು ಬೋಗುಣಿಯ ತುಂಬಾ ಹಿಂಡಿದನು.