Judges 6:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಗಿದ್ಯೋನನು ದೇವರಿಗೆ, “ನನ್ನ ಮೇಲೆ ಕೋಪಿಸಿಕೊಳ್ಳಬೇಡ. ನಾನು ಇನ್ನೊಂದು ಸಾಕ್ಷ್ಯವನ್ನು ಕೇಳುತ್ತೇನೆ. ಇನ್ನೊಂದು ಸಲ ಕುರಿಯ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುತ್ತೇನೆ. ಈ ಸಲ, ಸುತ್ತಮುತ್ತಲಿನ ಭೂಮಿಯ ಮಂಜಿನಿಂದ ಹಸಿಯಾಗಿ, ಕುರಿಯ ತುಪ್ಪಟ ಮಾತ್ರ ಒಣಗಿರಲಿ” ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು.
Kannada BSI Bible 2016
ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಿರಿಗಿ ದೇವರಿಗೆ - ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುವದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟವು ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ ಅಂದನು.
Kannada Bible (KNCL) BSI 2016
ಅವನು ಪುನಃ ದೇವರಿಗೆ, “ಸ್ವಾಮೀ, ಸಿಟ್ಟಾಗಬೇಡಿ; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿಮ್ಮನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿದ್ಯೋನನು ದೇವರಿಗೆ, “ನಾನು ಇನ್ನೊಂದು ಸಾರಿ ಮಾತನಾಡುವುದರಿಂದ ನಿಮ್ಮ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆಯ ತುಪ್ಪಟದಿಂದ ಇನ್ನೊಂದು ಸಾರಿ ನಾನು ನಿಮ್ಮನ್ನು ಶೋಧಿಸುವೆನು. ತುಪ್ಪಟ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ,” ಎಂದನು.