Judges 6:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಈ ಪ್ರದೇಶದಲ್ಲಿ ಪಾಳೆಯಮಾಡಿಕೊಂಡು ಇಸ್ರೇಲರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅವರು ಗಾಜಾ ನಗರದವರೆಗಿರುವ ಪ್ರದೇಶದಲ್ಲಿನ ಬೆಳೆಗಳನ್ನು ಹಾಳುಮಾಡಿದರು. ಅವರು ಇಸ್ರೇಲರ ಆಹಾರಕ್ಕಾಗಿ ಏನೂ ಉಳಿಸಲಿಲ್ಲ. ಅವರು ಕುರಿ, ದನ, ಕತ್ತೆಗಳನ್ನು ಸಹ ಉಳಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.
Kannada BSI Bible 2016
ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಜಾ ಪ್ರಾಂತದವರೆಗಿದ್ದ ಎಲ್ಲಾ ಭೂವಿುಯ ಹುಟ್ಟುವಳಿಯನ್ನು ಹಾಳುಮಾಡಿಬಿಟ್ಟದರಿಂದ ಇವರಿಗೆ ದವಸ ಧಾನ್ಯವಾಗಲಿ ಕುರಿದನಕತ್ತೆಗಳಾಗಲಿ ಉಳಿಯಲೇ ಇಲ್ಲ.
Kannada Bible (KNCL) BSI 2016
ಗಾಜಾ ಪ್ರಾಂತ್ಯದವರೆಗೆ ಭೂಮಿಯ ಫಲವನ್ನೆಲ್ಲ ನಾಶ ಮಾಡುತ್ತಿದ್ದರು. ಈ ಕಾರಣ ಇಸ್ರಯೇಲರಿಗೆ ದವಸಧಾನ್ಯವಾಗಲಿ, ಕುರಿದನಕತ್ತೆಗಳಾಗಲಿ ಉಳಿಯುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ.