Judges 7:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಪ್ರಿಯತಮತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
Kannada BSI Bible 2016
ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ವಿುಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
Kannada Bible (KNCL) BSI 2016
ಮಿದ್ಯಾನ್ಯರೂ ಅಮಾಲೇಕ್ಯರೂ ಪೂರ್ವದೇಶದವರೂ ಮಿಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಮಲಗಿದ್ದರು. ಅವರ ಒಂಟೆಗಳು ಸಮುದ್ರದ ಮರಳಿನ ಹಾಗೆ ಅಸಂಖ್ಯವಾಗಿದ್ದವು.