Judges 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.
Kannada BSI Bible 2016
ಅವನ ಜೊತೆಗಾರನು ಪ್ರತ್ಯುತ್ತರ ಕೊಟ್ಟು --ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲ್‌ನ ಮನುಷ್ಯನ ಕತ್ತಿಯೇ ಹೊರತು ಬೇರೆ ಯಲ್ಲ. ದೇವರು ಮಿದ್ಯಾನ್ಯರನ್ನೂ ಈ ಸಮಸ್ತ ದಂಡನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜೊತೆಗಾರನು - ಇದು ಇಸ್ರಾಯೇಲ್ಯನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ವಿುದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿದನು ಅಂದನು.
Kannada Bible (KNCL) BSI 2016
“ಇದು ಇಸ್ರಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿರುವರು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಜೊತೆಗಾರನು ಉತ್ತರಕೊಟ್ಟು, “ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲಿನ ಮನುಷ್ಯನ ಖಡ್ಗವೇ ಹೊರತು ಬೇರೆ ಅಲ್ಲ. ದೇವರು ಮಿದ್ಯಾನ್ಯರನ್ನೂ, ಈ ಸಮಸ್ತ ಪಾಳೆಯನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು.