Judges 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕನಸಿನ ಬಗ್ಗೆ ಮತ್ತು ಅದರ ಅರ್ಥದ ಬಗ್ಗೆ ಅವರು ಮಾತನಾಡುವುದನ್ನು ಕೇಳಿದ ಗಿದ್ಯೋನನು ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. ಆಮೇಲೆ ಗಿದ್ಯೋನನು ಇಸ್ರೇಲರ ಪಾಳೆಯಕ್ಕೆ ಹಿಂದಿರುಗಿದನು. ಗಿದ್ಯೋನನು ಜನರನ್ನು, “ಏಳಿರಿ! ಯೆಹೋವನು ಮಿದ್ಯಾನ್ಯರನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತಾನೆ” ಎಂದು ಕೂಗಿಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.
Kannada BSI Bible 2016
ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು.
Kannada Bible (KNCL) BSI 2016
ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಸರ್ವೇಶ್ವರನಿಗೆ ಅಡ್ಡಬಿದ್ದು ಇಸ್ರಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು, ಅವರಿಗೆ, “ಏಳಿ, ಸರ್ವೇಶ್ವರ ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿದ್ಯೋನನು ಆ ಕನಸಿನ ವಿವರವನ್ನೂ, ಅದರ ಅರ್ಥವನ್ನೂ ಕೇಳಿದಾಗ, ಅವನು ಯೆಹೋವ ದೇವರನ್ನು ಆರಾಧಿಸಿ, ಇಸ್ರಾಯೇಲ್ ಪಾಳೆಗೆ ತಿರುಗಿಬಂದು, “ಏಳಿರಿ, ಯೆಹೋವ ದೇವರು ಮಿದ್ಯಾನ್ಯರ ಪಾಳೆಯನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದು ಹೇಳಿದನು.