Judges 7:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಗಿದ್ಯೋನನು ಆ ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,
Kannada BSI Bible 2016
ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು
Kannada Bible (KNCL) BSI 2016
ಅಲ್ಲದೆ, ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪುಮಾಡಿ ಪ್ರತಿ ಒಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು ಅವರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮುನ್ನೂರು ಜನರನ್ನು ಮೂರು ಭಾಗವಾಗಿ ಹಂಚಿ, ಎಲ್ಲರ ಕೈಯಲ್ಲಿ ತುತೂರಿಗಳನ್ನೂ, ಬರಿದಾದ ಕೊಡಗಳನ್ನೂ, ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟನು.