Judges 7:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಶತ್ರುಗಳ ಪಾಳೆಯಕ್ಕೆ ಮುತ್ತಿಗೆ ಹಾಕಿರಿ. ನನ್ನ ಸಂಗಡವಿರುವ ಜನರು ತುತ್ತೂರಿಯನ್ನು ಊದುವರು. ನಾವು ನಮ್ಮ ತುತ್ತೂರಿಗಳನ್ನು ಊದಿದಾಗ ನೀವು ಸಹ ನಿಮ್ಮ ತುತ್ತೂರಿಗಳನ್ನು ಊದಿರಿ. ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ,’ ಎಂದು ಕೂಗಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’” ಎಂದು ಹೇಳಿದನು.
Kannada BSI Bible 2016
ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ - ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ ಎಂದು ಹೇಳಿದನು.
Kannada Bible (KNCL) BSI 2016
ನಾನೂ ನನ್ನ ಸಂಗಡಿಗರೂ ಕೊಂಬುಗಳನ್ನು ಊದುವಾಗ ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಸರ್ವೇಶ್ವರಗೆ ಜಯ, ಗಿದ್ಯೋನನಿಗೆ ಜಯ’ ಎಂದು ಕೂಗಿರಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೂ, ನನ್ನ ಸಂಗಡ ಇರುವವರೆಲ್ಲರೂ ತುತೂರಿಯನ್ನು ಊದುವಾಗ, ನೀವೆಲ್ಲರೂ ಪಾಳೆಯ ಸುತ್ತಲೂ, ಎಲ್ಲಾ ಕಡೆಯಲ್ಲಿಯೂ ತುತೂರಿಗಳನ್ನು ಊದಿ, ‘ಯೆಹೋವ ದೇವರಿಗಾಗಿ, ಗಿದ್ಯೋನನಿಗಾಗಿ,’ ಎಂದು ಕೂಗಿರಿ,” ಎಂದನು.