Judges 7:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿದ್ಯೋನನು ಮತ್ತು ಅವನ ಜೊತೆಯಲ್ಲಿದ್ದ ನೂರು ಜನರು ಶತ್ರುಗಳ ಪಾಳೆಯದ ಬಳಿಗೆ ಹೋದರು. ಶತ್ರುಗಳ ಪಾಳೆಯದ ಕಾವಲುಗಾರರು ಬದಲಾದ ಕೂಡಲೆ ಅವರು ಅಲ್ಲಿಗೆ ಹೋಗಿದ್ದರು. ಆಗ ಮಧ್ಯರಾತ್ರಿಯಾಗಿತ್ತು. ಗಿದ್ಯೋನ ಮತ್ತು ಅವನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ಮಡಕೆಗಳನ್ನು ಒಡೆದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
Kannada BSI Bible 2016
ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾತ್ರಿಯ ಮಧ್ಯಯಾಮವು ಪ್ರಾರಂಭಿಸಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ [ಶತ್ರುಗಳ] ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
Kannada Bible (KNCL) BSI 2016
ಮಧ್ಯರಾತ್ರಿ ಪ್ರಾರಂಭವಾಗುತ್ತಿದ್ದಂತೆ ಮೊದಲ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನು ಮತ್ತು ಅವನ ಸಂಗಡ ಇದ್ದ ನೂರುಮಂದಿ (ಶತ್ರುಗಳ) ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ, ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಧ್ಯರಾತ್ರಿ ಆರಂಭದ ಜಾವದಲ್ಲಿ ಕಾವಲುಗಾರರನ್ನು ಬದಲಾಯಿಸಿದಾಗ, ಗಿದ್ಯೋನನೂ, ಅವನ ಸಂಗಡ ಇದ್ದ ನೂರು ಮಂದಿಯೂ ಪಾಳೆಯ ಹೊರಗೆ ಬಂದು, ತುತೂರಿಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.