Judges 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.
Kannada BSI Bible 2016
ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಗಿದ್ಯೋನನಿಗೆ - ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ವಿುದ್ಯಾನ್ಯರನ್ನು ಒಪ್ಪಿಸುವದು ನನಗೆ ಸರಿಯಾಗಿ ಕಾಣುವದಿಲ್ಲ; ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳ ಪಟ್ಟು ನನ್ನನ್ನು ಅಲಕ್ಷ್ಯಮಾಡಾರು.
Kannada Bible (KNCL) BSI 2016
ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ, ನಾನು ಮಿದ್ಯಾನ್ಯರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವುದಕ್ಕೆ ಸಾಧ್ಯವಿಲ್ಲ ಇಸ್ರಾಯೇಲರು, ‘ನನ್ನ ಕೈ ನನ್ನನ್ನು ರಕ್ಷಿಸಿತು,’ ಎಂದು ನನಗೆ ವಿರೋಧವಾಗಿ ಹೆಚ್ಚಳಪಟ್ಟಾರು.