Judges 7:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಗಿದ್ಯೋನನ ಮೂರು ಗುಂಪಿನ ಜನರು ತಮ್ಮ ತುತ್ತೂರಿಗಳನ್ನು ಊದಿದರು ಮತ್ತು ತಮ್ಮ ಮಡಕೆಗಳನ್ನು ಒಡೆದುಹಾಕಿದರು. ಅವರು ಪಂಜುಗಳನ್ನು ತಮ್ಮ ಎಡಗೈಗಳಲ್ಲಿಯೂ ತುತ್ತೂರಿಗಳನ್ನು ತಮ್ಮ ಬಲಗೈಗಳಲ್ಲಿಯೂ ಹಿಡಿದುಕೊಂಡರು. ಅವರು ತಮ್ಮ ತುತ್ತೂರಿಗಳನ್ನು ಊದುತ್ತಾ “ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ” ಎಂದು ಕೂಗಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ
Kannada BSI Bible 2016
ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು - ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ
Kannada Bible (KNCL) BSI 2016
ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಸರ್ವೇಶ್ವರನಿಗೆ ಪರಾಕು” ಎಂದು ಕೂಗಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ, ಆ ಕೊಡಗಳನ್ನು ಒಡೆದುಬಿಟ್ಟು, ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ, ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು, “ಯೆಹೋವ ದೇವರಿಗಾಗಿ ಖಡ್ಗ, ಗಿದ್ಯೋನನಿಗಾಗಿ ಖಡ್ಗ,” ಎಂದು ಕೂಗಿ ಪಾಳೆಯ ಸುತ್ತಲೂ ಅವರವರ ಸ್ಥಳದಲ್ಲಿ ನಿಂತರು.