Judges 7:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.
Kannada BSI Bible 2016
ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.
Kannada Bible (KNCL) BSI 2016
ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.