Judges 7:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕಾಗಿ ಈಗ, ‘ಭಯಪಡುವವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು’ ಎಂದು ಪ್ರಕಟಿಸು” ಎಂದು ಹೇಳಿದನು. ಆ ಸಮಯದಲ್ಲಿ ಇಪ್ಪತ್ತೆರಡು ಸಾವಿರ ಜನರು ಗಿದ್ಯೋನನನ್ನು ಬಿಟ್ಟು ಮನೆಗೆ ಹಿಂದಿರುಗಿದರು. ಆದರೆ ಇನ್ನೂ ಹತ್ತು ಸಾವಿರ ಜನರು ಉಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
Kannada BSI Bible 2016
ಆದದರಿಂದ ನೀನು ಹೋಗಿ ಜನರು ಕೇಳುವ ಹಾಗೆ--ಯಾವನಿಗೆ ಭಯವೂ ಹೆದರಿ ಕೆಯೂ ಉಂಟೋ ಅವನು ತಿರಿಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ ಎಂದು ಪ್ರಕಟಮಾಡು ಅಂದನು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ತಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ - ಧೈರ್ಯವಿಲ್ಲದವರೂ ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
Kannada Bible (KNCL) BSI 2016
ಆದ್ದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, “ಭಯಬೀತರೂ ಅಂಜುಬುರುಕರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ,’ ಎಂದು ಪ್ರಕಟಿಸು,” ಎಂದರು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀನು ಹೋಗಿ ಜನರು ಕೇಳುವ ಹಾಗೆ, ‘ಯಾವನಿಗೆ ಭಯವೂ, ಹೆದರಿಕೆಯೂ ಉಂಟೋ ಅವನು ತಿರುಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ,’ ಎಂದು ಪ್ರಕಟಮಾಡು,” ಎಂದರು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ಜನರು ತಿರುಗಿ ಹೋದರು; ನಂತರ ಹತ್ತು ಸಾವಿರ ಜನರು ಉಳಿದರು.