Judges 7:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಗಿದ್ಯೋನನು ಅವರನ್ನು ನದಿಯ ಹತ್ತಿರ ಕರೆದುಕೊಂಡು ಹೋದನು. ಅಲ್ಲಿ ಯೆಹೋವನು ಗಿದ್ಯೋನನಿಗೆ, “ನೀರನ್ನು ನಾಯಿಯಂತೆ ತಮ್ಮ ನಾಲಿಗೆಯಿಂದ ನೆಕ್ಕಿ ಕುಡಿಯುವವರನ್ನು ಒಂದು ಗುಂಪನ್ನಾಗಿ ಮತ್ತು ನೆಲಕ್ಕೆ ಮೊಣಕಾಲೂರಿ ನೀರನ್ನು ಕುಡಿಯುವವರನ್ನು ಇನ್ನೊಂದು ಗುಂಪನ್ನಾಗಿ ವಿಂಗಡಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು.
Kannada BSI Bible 2016
ಗಿದ್ಯೋನನು ಜನರನ್ನು ಜಲದ ಬಳಿಗೆ ಕರಕೊಂಡು ಬಂದನು. ಆಗ ಕರ್ತನು ಗಿದ್ಯೋನನಿಗೆನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ ಕುಡಿಯುವದಕ್ಕೆ ಮೊಣ ಕಾಲೂರಿ ಬೊಗ್ಗುವ ಪ್ರತಿಯೊಬ್ಬನನ್ನೂ ಬೇರೆ ಬೇರೆ ಯಾಗಿ ನಿಲ್ಲಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ - ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲುಸು ಎಂದು ಹೇಳಿದನು.
Kannada Bible (KNCL) BSI 2016
ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಸರ್ವೇಶ್ವರ ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಿದ್ಯೋನನು ಜನರನ್ನು ಹಳ್ಳದ ಬಳಿಗೆ ಕರಕೊಂಡು ಬಂದನು. ಆಗ ಯೆಹೋವ ದೇವರು ಗಿದ್ಯೋನನಿಗೆ, “ನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ, ಕುಡಿಯುವುದಕ್ಕೆ ಮೊಣಕಾಲೂರಿ ಬಗ್ಗುವ ಪ್ರತಿಯೊಬ್ಬನನ್ನೂ ಬೇರೆಬೇರೆಯಾಗಿ ನಿಲ್ಲಿಸು,” ಎಂದರು.