Judges 8:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.
Kannada BSI Bible 2016
ಆದರೆ ಜೆಬಹನೂ ಚಲ್ಮುನ್ನನೂ ತಮ್ಮ ಸೈನ್ಯವಾದ ಹೆಚ್ಚುಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರೆಲ್ಲಾ ಕತ್ತಿ ಹಿಡಿಯತಕ್ಕ ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ ಮೂಡಣದ ಸಮಸ್ತ ಮಕ್ಕಳು ಅಲ್ಲಿ ಉಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆಬಹ, ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳುಕೊಂಡಿದ್ದರು. ಮೂಡಣ ದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.
Kannada Bible (KNCL) BSI 2016
ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.