Judges 8:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿದ್ಯಾನ್ಯರ ಅರಸರಾದ ಜೆಬಹನೂ ಚಲ್ಮುನ್ನನೂ ಓಡಿಹೋದರು. ಆದರೆ ಗಿದ್ಯೋನನು ಬೆನ್ನಟ್ಟಿ ಆ ಅರಸರನ್ನು ಹಿಡಿದುಕೊಂಡನು. ಗಿದ್ಯೋನ ಮತ್ತು ಅವನ ಸೈನಿಕರು ಶತ್ರುಸೈನ್ಯವನ್ನು ಸೋಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು.
Kannada BSI Bible 2016
ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜೆಬಹನೂ ಚಲ್ಮುನ್ನನೂ ಓಡಿ ಹೋಗಲಾಗಿ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿ ಬಿಟ್ಟನು.
Kannada Bible (KNCL) BSI 2016
ಜೆಬಹನೂ ಚಲ್ಮುನ್ನನೂ ಓಡಿಹೋಗುವಾಗ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೆಬಹನೂ, ಚಲ್ಮುನ್ನನೂ ಓಡಿ ಹೋದದ್ದರಿಂದ, ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹನನ್ನೂ, ಚೆಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ಪಾಳೆಯನ್ನೆಲ್ಲಾ ಚದರಿಸಿಬಿಟ್ಟರು.