Judges 8:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿದ್ಯೋನನು ಸುಖೋತ್ ನಗರದ ಒಬ್ಬ ತರುಣನನ್ನು ಹಿಡಿದುಕೊಂಡನು. ಗಿದ್ಯೋನನು ಆ ತರುಣನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ಆ ತರುಣನು ಗಿದ್ಯೋನನಿಗಾಗಿ ಕೆಲವು ಹೆಸರುಗಳನ್ನು ಬರೆದನು. ಆ ತರುಣನು ಸುಖೋತ್ ನಗರದ ನಾಯಕರ ಮತ್ತು ಹಿರಿಯರ ಹೆಸರುಗಳನ್ನು ಬರೆದನು. ಅವನು ಎಪ್ಪತ್ತೇಳು ಜನರ ಹೆಸರುಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.
Kannada BSI Bible 2016
ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರಿಸಿಕೊಂಡನು.
Kannada Bible (KNCL) BSI 2016
ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಕ್ಕೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು, ಸುಕ್ಕೋತಿನ ಪ್ರಧಾನರೂ, ಹಿರಿಯರೂ ಆದ ಎಪ್ಪತ್ತೇಳು ಜನರ ಹೆಸರನ್ನು ಅವನು ಬರೆದನು.