Judges 8:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು. ಅವರು “ನಿನ್ನ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬನೂ ಒಬ್ಬ ರಾಜಕುಮಾರನಂತೆ ಕಂಡನು” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.
Kannada BSI Bible 2016
ಅವನು ಜೆಬಹನಿಗೂ ಚಲ್ಮುನ್ನನಿಗೂ--ನೀವು ತಾಬೋರದಲ್ಲಿ ಕೊಂದುಹಾಕಿದ ಆ ಮನುಷ್ಯರು ಹೇಗಿದ್ದರು ಅಂದನು. ಅದಕ್ಕವರು--ನಿನ್ನ ಹಾಗೆಯೇ; ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಾ ಗಿದ್ದರು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವನು ಜೆಬಹ, ಚಲ್ಮುನ್ನ ಎಂಬವರನ್ನು - ನೀವು ತಾಬೋರದಲ್ಲಿ ಕೊಂದು ಹಾಕಿದ ಮನುಷ್ಯರು ಹೇಗಿದ್ದರು ಎಂದು ಕೇಳಲಾಗಿ ಅವರು ಅವನಿಗೆ - ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.