Judges 8:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ
Kannada BSI Bible 2016
ಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು - ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿದ್ದಿಲ್ಲ ಎಂದು ಹೇಳಿ
Kannada Bible (KNCL) BSI 2016
ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಸರ್ವೇಶ್ವರನ ಆಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದು ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು. ಯೆಹೋವ ದೇವರ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದನು.