Judges 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿದ್ಯೋನನು ಎಫ್ರಾಯೀಮ್ಯರಿಗೆ, “ನೀವು ಮಾಡಿದಷ್ಟು ದೊಡ್ಡ ಕೆಲಸವನ್ನು ನಾನು ಮಾಡಿಲ್ಲ. ನನ್ನ ಅಬೀಯೆಜೆರನ ಕುಟುಂಬದವರಿಗಿಂತ ಎಫ್ರಾಯೀಮ್ಯರಾದ ನಿಮ್ಮ ಸುಗ್ಗಿಯೇ ಬಹಳ ಚೆನ್ನಾಗಿ ಆಗಿದೆಯಲ್ಲವೇ? ಸುಗ್ಗಿಯ ಕಾಲದಲ್ಲಿ ನಮ್ಮ ಕುಟುಂಬದವರು ಕೂಡಿಸುವ ದ್ರಾಕ್ಷಿಗಿಂತ ಹೆಚ್ಚು ದ್ರಾಕ್ಷಿಯನ್ನು ನೀವು ಹೊಲದಲ್ಲಿಯೇ ಬಿಟ್ಟುಬಿಡುತ್ತೀರಿ! ಇದು ನಿಜವಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?
Kannada BSI Bible 2016
ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಅವರಿಗೆ - ನೀವು ಮಾಡಿದ ಕಾರ್ಯಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದೆನು? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ.
Kannada Bible (KNCL) BSI 2016
ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸರಿಸಮಾನ ಆದದ್ದನ್ನು ನಾನೇನು ಮಾಡಿದೆ? ಅಭೀಯಿಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಯಿಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವರಿಗೆ, “ನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿದೆನು? ಅಬೀಯೆಜೆರನ ದ್ರಾಕ್ಷಿ ಫಲ ಕೂಡಿಸುವುದಕ್ಕಿಂತ ಎಫ್ರಾಯೀಮನ ಉಳಿದ ದ್ರಾಕ್ಷಿಗಳನ್ನು ಸಂಗ್ರಹಿಸುವುದು ಉತ್ತಮವಲ್ಲವೇ?