Judges 8:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
Kannada BSI Bible 2016
ಆಗ ಜೆಬ ಹನೂ ಚಲ್ಮುನ್ನನೂ--ನೀನು ಎದ್ದು ನಮ್ಮ ಮೇಲೆ ಬೀಳು; ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
Kannada Bible (KNCL) BSI 2016
ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.