Judges 8:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರಿಂದ ರಕ್ಷಿಸಿರುವೆ. ಅದಕ್ಕಾಗಿ ಈಗ ನಮ್ಮ ಮೇಲೆ ಆಳ್ವಿಕೆ ಮಾಡು. ನೀನೂ ನಿನ್ನ ಮಗನೂ ನಿನ್ನ ಮೊಮ್ಮಗನೂ ನಮ್ಮನ್ನು ಆಳಬೇಕೆಂಬುದು ನಮ್ಮ ಆಶೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.
Kannada BSI Bible 2016
ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ - ನೀನು ನಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು ಅನ್ನಲು
Kannada Bible (KNCL) BSI 2016
ತರುವಾಯ ಇಸ್ರಯೇಲರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲವೇ? ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ, ನೀನೂ, ನಿನ್ನ ಪುತ್ರನೂ, ನಿನ್ನ ಪುತ್ರನ ಪುತ್ರನೂ ನಮ್ಮನ್ನು ಆಳಬೇಕು,” ಎಂದರು.