Judges 8:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.
Kannada BSI Bible 2016
ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು).
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆ ಹೊಡೆದ ಮುರುವುಗಳನ್ನು ನನಗೆ ಕೊಡಲಿ ಅಂದನು. ವಿುದ್ಯಾನ್ಯರು ಇಷ್ಮಾಯೇಲ್ಯರಾಗಿದ್ದದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು -
Kannada Bible (KNCL) BSI 2016
ಆದರೆ ನಿಮ್ಮಲ್ಲಿ ನನ್ನದೊಂದು ಬಿನ್ನಹಃ ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಮುರುವುಗಳನ್ನು ನನಗೆ ಕೊಡಲಿ,” ಎಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದುದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು ಗಿದ್ಯೋನನು ಅವರಿಗೆ, “ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿಯೊಬ್ಬನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಿರಿ,” ಎಂದನು. ಏಕೆಂದರೆ ಮಿದ್ಯಾನರು ಇಷ್ಮಾಯೇಲರಾಗಿದ್ದದರಿಂದ ಅವರು ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.