Judges 8:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪ ಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.
Kannada BSI Bible 2016
ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು. ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದರಿಂದ ಇಸ್ರಾಯೇಲ್ಯರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.
Kannada Bible (KNCL) BSI 2016
ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.