Judges 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬನನ್ನು ಸೆರೆಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು ಹೋಲಿಸಲು ಹೇಗೆ ಸಾಧ್ಯ?” ಎಂದು ಹೇಳಿದನು. ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.
Kannada BSI Bible 2016
ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಿಮ್ಮ ಕೈಯಲ್ಲಿ ವಿುದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.
Kannada Bible (KNCL) BSI 2016
ದೇವರು ಮಿದ್ಯಾನ್ಯರ ನಾಯಕರಾದ ಓರೇಬ್ ಮತ್ತು ಜೇಬರನ್ನೇ ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರಲ್ಲವೆ; ಇದಕ್ಕೆ ಸರಿಸಮಾನವಾದದ್ದನ್ನು ನಾನೇನು ಮಾಡಿದ್ದೇನೆ? ಎಂದನು. ಈ ಮಾತುಗಳನ್ನು ಕೇಳಿದ ಮೇಲೆ ಅವರ ಸಿಟ್ಟಿಳಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನನ್ನೂ, ಜೇಬನನ್ನೂ ಒಪ್ಪಿಸಿಕೊಡಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು?” ಎಂದನು. ಅವನು ಈ ಮಾತು ಹೇಳಿದಾಗ, ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.