Judges 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.
Kannada BSI Bible 2016
ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು.
Kannada Bible (KNCL) BSI 2016
ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.