Judges 8:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಸುಖೋತ್ ನಗರದ ನಾಯಕರು ಗಿದ್ಯೋನನಿಗೆ, “ನಾವು ನಿಮ್ಮ ಸೈನಿಕರಿಗೆ ಆಹಾರವನ್ನು ಏಕೆ ಕೊಡಬೇಕು? ನೀವು ಜೆಬಹನನ್ನು ಮತ್ತು ಚಲ್ಮುನ್ನನನ್ನು ಇನ್ನೂ ಬಂಧಿಸಲೇ ಇಲ್ಲ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.
Kannada BSI Bible 2016
ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸುಖೋತಿನ ಮುಖಂಡರು ಅವನಿಗೆ - ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬರವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?”, ಎಂದು ತಿರಸ್ಕರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸುಕ್ಕೋತಿನ ಪ್ರಧಾನರು ಅವನಿಗೆ, “ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈವಶವಾಗಿದೆಯೋ?” ಎಂದರು.