Judges 9:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ದ್ರಾಕ್ಷಾಲತೆಯು, ‘ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟುಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.
Kannada BSI Bible 2016
ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಅವುಗಳಿಗೆ - ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.
Kannada Bible (KNCL) BSI 2016
ಅದಕ್ಕೆ ಆ ಬಳ್ಳಿ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮಾನವರಿಗೂ ಆನಂದ ತರುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.