Judges 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.
Kannada BSI Bible 2016
ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು - ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ದಹಸಿಬಿಡುವದು ಎಂದಿತು.
Kannada Bible (KNCL) BSI 2016
ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.