Judges 9:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಈಗ ನಮ್ಮ ತಂದೆಯ ಕುಟುಂಬದವರನ್ನು ವಿರೋಧಿಸುತ್ತಿದ್ದೀರಿ. ನೀವು ನಮ್ಮ ತಂದೆಯ ಎಪ್ಪತ್ತು ಮಕ್ಕಳನ್ನು ಏಕಕಾಲದಲ್ಲಿ ಕೊಲೆಮಾಡಿದ್ದೀರಿ. ನೀವು ಅಬೀಮೆಲೆಕನನ್ನು ಶೆಕೆಮಿನ ಅರಸನನ್ನಾಗಿ ಮಾಡಿದ್ದೀರಿ. ಅವನು ನಿಮ್ಮ ರಕ್ತ ಸಂಬಂಧಿ ಎಂಬ ಕಾರಣದಿಂದ ಅವನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ಅವನು ಕೇವಲ ನಮ್ಮ ತಂದೆಯ ದಾಸಿ ಪುತ್ರ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.
Kannada BSI Bible 2016
ಅವನ ಎಪ್ಪತ್ತು ಮಕ್ಕಳನ್ನು ಒಂದೇ ಕಲ್ಲಿನ ಮೇಲೆ ಕೊಂದು ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ಅವನು ನಿಮ್ಮ ಸಹೋದರನಾಗಿರುವದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ ಶೆಕೆವಿುನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.
Kannada Bible (KNCL) BSI 2016
ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿದ ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಿಮ್ಮ ಬಂಧುವೆಂದು ಹೇಳಿ ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಈ ಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು, ಅವನ ಎಪ್ಪತ್ತು ಮಕ್ಕಳನ್ನು ಒಂದೇ ಬಂಡೆ ಮೇಲೆ ಕೊಂದು, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು, ಅವನು ನಿಮ್ಮ ಸಹೋದರನಾಗಿರುವುದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,