Judges 9:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ‘ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.
Kannada BSI Bible 2016
ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ದಯವಿಟ್ಟು ಶೆಕೆವಿುನ ಹಿರಿಯರನ್ನು ಮಾತಾಡಿಸಿ - ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವದು ಒಳ್ಳೇದೋ ಅಥವಾ ಒಬ್ಬನೇ ಆಳುವದು ಮೇಲೋ ಎಂದು ಅವರನ್ನು ಕೇಳಿ ನಾನು ಅವರ ರಕ್ತ ಸಂಬಂಧಿಯಾಗಿದ್ದೇನೆಂಬದನ್ನು ಜ್ಞಾಪಕಪಡಿಸಿರಿ ಅಂದನು.
Kannada Bible (KNCL) BSI 2016
“ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು.