Judges 9:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.
Kannada BSI Bible 2016
ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನ ಜನರನ್ನೂ ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನ ರಿಂದಲೂ ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆವಿುನವರನ್ನೂ ವಿುಲ್ಲೋ ಕೋಟೆಯವರನ್ನೂ ದಹಿಸಿ ಬಿಡಲಿ; ಶೆಕೆವಿುನವರಿಂದಲೂ ವಿುಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿ ಬಿಡಲಿ.
Kannada Bible (KNCL) BSI 2016
ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.