Judges 9:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು. (Verses 23-24)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.
Kannada BSI Bible 2016
ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವನಿಗೂ ಶೆಕೆವಿುನ ಹಿರಿಯರಿಗೂ ವೈಮನಸ್ಯ ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.
Kannada Bible (KNCL) BSI 2016
ಸರ್ವೇಶ್ವರಸ್ವಾಮಿ ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ದುಷ್ಟ ಆತ್ಮವನ್ನು ಕಳುಹಿಸಿದರು. ಈ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹ ಎಸಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.