Judges 9:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಕೆಮಿನ ಹಿರಿಯರಿಗೆ ಅಬೀಮೆಲೆಕನ ಮೇಲಿದ್ದ ಅಭಿಮಾನ ಇಲ್ಲವಾಯಿತು. ಅವರು ಅಲ್ಲಿ ಸಂಚರಿಸುವ ಜನರ ಮೇಲೆ ಧಾಳಿ ಮಾಡಿ ಲೂಟಿಮಾಡಲು ಬೆಟ್ಟಗಳ ಮೇಲೆ ಜನರನ್ನು ಇಟ್ಟರು. ಅಬೀಮೆಲೆಕನಿಗೆ ಈ ಧಾಳಿಗಳ ವಿಷಯ ತಿಳಿದುಬಂತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.
Kannada BSI Bible 2016
ಶೆಕೆಮಿನ ಮನುಷ್ಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚಿಕೊಳ್ಳು ವವರನ್ನು ಇಟ್ಟು ತಮ್ಮ ಸವಿಾಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲುಕೊಂಡರು. ಅದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಕೆವಿುನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲುಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.
Kannada Bible (KNCL) BSI 2016
ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆಮಾಡುತ್ತಿದ್ದರು. ಈ ವರ್ತಮಾನ ಅಬೀಮೆಲೆಕನಿಗೆ ಮುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಕೆಮಿನ ಹಿರಿಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚುಗಾರರನ್ನು ಇಟ್ಟು, ತಮ್ಮ ಸಮೀಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲಿದುಕೊಂಡರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.