Judges 9:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನನಗೆ ಈ ಜನರ ಅಧಿಕಾರಿಯನ್ನಾಗಿ ಮಾಡಿದರೆ, ನಾನು ಅಬೀಮೆಲೆಕನನ್ನು ನಾಶಮಾಡುತ್ತೇನೆ. ನಾನು ಅವನಿಗೆ, ‘ನಿನ್ನ ಸೈನ್ಯವನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಬಾ’ ಎಂದು ಕರೆಯುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಜನರ ಮೇಲೆ ನನಗೆ ಅಧಿಕಾರವಿದ್ದಿದ್ದರೆ ಅಬೀಮೆಲೆಕನನ್ನು ಓಡಿಸಿಬಿಡುತ್ತಿದ್ದೆನು” ಎಂದು ಹೇಳಿ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ” ಎಂದು ಕೊಚ್ಚಿಕೊಂಡನು.
Kannada BSI Bible 2016
ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆನು ಎಂದು ಹೇಳಿ - ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ ಎಂದು ಕೊಚ್ಚಿಕೊಂಡನು.
Kannada Bible (KNCL) BSI 2016
ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆ,” ಎಂದು ಹೇಳಿದನು. ಅಷ್ಟು ಮಾತ್ರವಲ್ಲದೆ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ,” ಎಂದು ಕೊಚ್ಚಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುತ್ತಿದ್ದೆನು. ತರುವಾಯ ಅಬೀಮೆಲೆಕನಿಗೆ, ‘ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ,’ ಎಂದು ಹೇಳುತ್ತಿದ್ದೆನು,” ಎಂದನು.