Judges 9:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಮೆಲೆಕನ ಸೋದರ ಮಾವಂದಿರು ಶೆಕೆಮಿನ ಹಿರಿಯರ ಜೊತೆ ಮಾತನಾಡಿ ಅವರಿಗೆ ಆ ಪ್ರಶ್ನೆಯನ್ನು ಕೇಳಿದರು. ಶೆಕೆಮಿನ ಹಿರಿಯರು ಅಬೀಮೆಲೆಕನ ಪಕ್ಷವಹಿಸಲು ನಿರ್ಧರಿಸಿದರು. ಆ ಹಿರಿಯರು, “ಎಷ್ಟೇ ಆದರೂ ಅವನು ನಮ್ಮ ಸಹೋದರ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲಾ” ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು.
Kannada BSI Bible 2016
ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಶೆಕೆವಿುನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು - ಇವನು ನಮ್ಮ ಸಹೋದರನಾಗಿದ್ದಾನಲ್ಲಾ ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವದಕ್ಕೆ ಒಡಂಬಟ್ಟರು.
Kannada Bible (KNCL) BSI 2016
ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಿದರು. ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲವೆ” ಎಂದುಕೊಂಡು ಅವನ ಪಕ್ಷವಹಿಸಲು ಒಪ್ಪಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಹಿರಿಯರೆಲ್ಲರೂ ಕೇಳುವಂತೆ ಈ ಮಾತುಗಳನ್ನೆಲ್ಲಾ ಹೇಳಿದರು. ಅವರು, “ಇವನು ನಮ್ಮ ಸಹೋದರನು,” ಎಂದು ಹೇಳಿದ್ದರಿಂದ, ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.