Judges 9:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆಬುಲನು ಅರೂಮ ನಗರದಲ್ಲಿದ್ದ11 ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿದನು. ಅವನು ಕಳುಹಿಸಿದ ಸಂದೇಶ ಹೀಗಿದೆ: “ಎಬೆದನ ಮಗನಾದ ಗಾಳನು ಮತ್ತು ಅವನ ಸಹೋದರರು ಶೆಕೆಮ್ ನಗರಕ್ಕೆ ಬಂದಿದ್ದಾರೆ. ಅವರು ನಿನಗೆ ತೊಂದರೆಯನ್ನು ಉಂಟುಮಾಡುತ್ತಿದ್ದಾರೆ. ಗಾಳನು ಇಡೀ ನಗರವನ್ನು ನಿನ್ನ ವಿರುದ್ಧ ಎತ್ತಿಕಟ್ಟುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.
Kannada BSI Bible 2016
ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ--ಇಗೋ, ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ, ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆವಿುನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.
Kannada Bible (KNCL) BSI 2016
“ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ, “ಏಬೆದನ ಮಗ ಗಾಳನೂ, ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ. ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಿದ್ದಾರೆ.