Judges 9:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಜೆಬುಲನು ಗಾಳನಿಗೆ, “ನೀನು ಈಗೇಕೆ ಬಡಾಯಿ ಕೊಚ್ಚುತ್ತಾ ಇಲ್ಲ? ‘ಅಬೀಮೆಲೆಕನು ಯಾರು? ನಾವು ಅವನ ಆಜ್ಞೆಯನ್ನು ಏಕೆ ಪಾಲಿಸಬೇಕು?’ ಎಂದು ನೀನು ಕೇಳಿದೆ. ನೀನು ಈ ಜನರನ್ನು ತಮಾಷೆಮಾಡಿದೆ. ಈಗ ಹೊರಗೆ ಹೋಗಿ ಅವರೊಂದಿಗೆ ಯುದ್ಧಮಾಡು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜೆಬುಲನು ಅವನಿಗೆ, “ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ” ಎಂದು ಹೇಳಿದನು.
Kannada BSI Bible 2016
ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜೆಬುಲನು ಅವನಿಗೆ - ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ ಎಂದು ಹೇಳಿದನು.
Kannada Bible (KNCL) BSI 2016
ಆಗ ಜೆಬುಲನು ಅವನಿಗೆ, “ಈಗ ನಿನ್ನ ಮಾತೆಲ್ಲಿ? ಅಬೀಮೆಲೆಕನು ಎಷ್ಟರವನು? ನಾವು ಅವನಿಗೆ ಏಕೆ ಸೇವೆಮಾಡಬೇಕು ಎಂದು ಕೊಚ್ಚಿಕೊಂಡಿಯಲ್ಲವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೇ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜೆಬೂಲನು ಅವನಿಗೆ, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು, ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನರಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧ ಮಾಡು,” ಎಂದನು.