Judges 9:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,
Kannada BSI Bible 2016
ಅವರು ಬಾಳ್‌ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಕಾಕಪೋಕರನ್ನು ಕೂಡಿಸಿ
Kannada Bible (KNCL) BSI 2016
ಅದು ಮಾತ್ರವಲ್ಲ, ಬಾಳ್ ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ಬೆಳ್ಳಿನಾಣ್ಯಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಪುಂಡಪೋಕರಿಗಳನ್ನು ಕೂಡಿಸಿ, ಅವರ ನಾಯಕನಾಗಿ ಹೊರಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.