Judges 9:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಮೆಲೆಕನು ಮತ್ತು ಅವನ ಜನರು ಗಾಳ ಮತ್ತು ಅವನ ಜನರನ್ನು ಬೆನ್ನಟ್ಟಿದರು. ಗಾಳನ ಜನರು ಹಿಂದಿರುಗಿ ಶೆಕೆಮ್ ನಗರದ ದ್ವಾರದ ಕಡೆಗೆ ಓಡಿದರು. ದ್ವಾರಕ್ಕೆ ಮುಟ್ಟುವ ಮೊದಲೇ ಗಾಳನ ಹಲವಾರು ಜನ ಹತರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅಬೀಮೆಲೆಕನಿಗೆ ಬೆನ್ನು ತೋರಿಸಿ ಓಡಿಹೋಗಲು, ಅವನು ಇವನನ್ನು ಹಿಂದಟ್ಟಿದನು. ಊರುಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.
Kannada BSI Bible 2016
ಆದರೆ ಅಬೀಮೆಲೆಕನು ಅವ ನನ್ನು ಹಿಂದಟ್ಟಿದಾಗ ಅವನು ಅವನ ಮುಂದೆ ಓಡಿ ಹೋದನು. ಪ್ರವೇಶ ದ್ವಾರದ ವರೆಗೆ ಅನೇಕರು ಸಂಹಾರವಾಗಿ ಅನೇಕರು ಗಾಯಗೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅಬೀಮೆಲೆಕನಿಗೆ ಬೆನ್ನುತೋರಿಸಿ ಓಡಿಹೋಗಬೇಕಾಗಲು ಅವನು ಇವನನ್ನು ಹಿಂದಟ್ಟಿದನು. ಊರುಬಾಗಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.
Kannada Bible (KNCL) BSI 2016
ಆದರೆ ಅಬೀಮೆಲೆಕನಿಗೆ ಬೆನ್ನುತೋರಿಸಿ ಓಡಿಹೋಗಬೇಕಾಯಿತು. ಅವನು ಇವನನ್ನು ಹಿಂದಟ್ಟಿದನು. ಊರಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಬೀಮೆಲೆಕನು ಅವನನ್ನು ಹಿಂದಟ್ಟಿದಾಗ, ಗಾಳನು ಅವನ ಮುಂದೆ ಓಡಿಹೋದನು. ಬಾಗಿಲ ಹತ್ತಿರದವರೆಗೆ ಅನೇಕರು ಸಂಹಾರವಾಗಿ, ಅನೇಕರು ಗಾಯಗೊಂಡರು.