Judges 9:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.
Kannada BSI Bible 2016
ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬೀಮೆಲೆಕನು ಆ ದಿವಸವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸಂಹರಿಸಿ ಊರನ್ನು ಕೆಡವಿಬಿಟ್ಟು ಅಲ್ಲಿ ಉಪ್ಪನ್ನು ಎರಚಿಬಿಟ್ಟನು.
Kannada Bible (KNCL) BSI 2016
ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು.