Judges 9:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು
Kannada BSI Bible 2016
ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್‌ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೊನ್ ಗುಡ್ಡವನ್ನೇರಿ ತನ್ನವರಿಗೆ - ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು
Kannada Bible (KNCL) BSI 2016
ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ,” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಮೆಲೆಕನು ತನ್ನ ಸಂಗಡ ಇದ್ದ ಸೈನಿಕರೆಲ್ಲರ ಸಹಿತವಾಗಿ ಚಲ್ಮೋನ್ ಬೆಟ್ಟವನ್ನೇರಿ, ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು, ಒಂದು ಮರದ ಕೊಂಬೆಯನ್ನು ಕಡಿದು, ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, ತನ್ನ ಕೂಡ ಇದ್ದ ಜನರಿಗೆ, “ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ,” ಎಂದನು.