Judges 9:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‌ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.
Kannada BSI Bible 2016
ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೂ ಅದರಂತೆಯೇ ಮಾಡಿ ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‍ಕೋಟೆಯವರೆಲ್ಲರೂ ಸತ್ತರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.
Kannada Bible (KNCL) BSI 2016
ಅವರೂ ಅದರಂತೆಯೇ ಮಾಡಿದರು. ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಸ್ತ್ರೀಪುರುಷರೆಲ್ಲಾ ಸೇರಿ ಅವರು ಸುಮಾರು ಸಾವಿರ ಜನರಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೈನಿಕರೆಲ್ಲರಲ್ಲಿ ಒಬ್ಬೊಬ್ಬನು ಒಂದೊಂದು ಕೊಂಬೆಯನ್ನು ಕಡಿದು, ಅಬೀಮೆಲೆಕನ ಹಿಂದೆ ಹೋಗಿ, ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ, ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಜನರು ಸತ್ತುಹೋದರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.