Judges 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.
Kannada BSI Bible 2016
ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.
Kannada Bible (KNCL) BSI 2016
ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.